ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಹಸೆ ಮಣಿ ಏರಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ: ನವ ದಂಪತಿಗೆ ಶುಭ ಕೋರಿದ ಗಣ್ಯರು

ಧಾರವಾಡ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮೊದಲ ಪುತ್ರಿ ವಿವಾಹ ಸಮಾರಂಭ ಕಾರ್ಯಕ್ರಮವು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಜರುಗಿತ್ತು. ಪ್ರಹ್ಲಾದ್ ಜೋಶಿಯವರ ಮೊದಲ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ್ ಹಸೆ ಮಣೆ ಏರುವ ಮೂಲಕ ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಗೋಧೊಳಿ ಮುಹೂರ್ತದಲ್ಲಿ ಅರ್ಪಿತಾ ಹಾಗೂ ಹೃಷಿಕೇಶ್ ನವದಂಪತಿಗಳಾಗಿ ಹಸೆ ಮಣೆ ಏರಿದ್ದು, ಹೊಸ ಬಾಳಿನ ಬದುಕಿಗೆ ಕಾಲಿಟ್ಟಿದ್ದಾರೆ. ಇನ್ನೂ ಕೇಂದ್ರ ಸಚಿವರ ಮಗಳ ಮದುವೆ ಸಮಾರಂಭದಲ್ಲಿ ಭಾಗವಹಿಸಿದ ರಾಜ್ಯದ ರಾಜ್ಯಪಾಲರು ಥಾವರ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಆರ್ ಅಶೋಕ, ಸಿ ಸಿ ಪಾಟೀಲ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ನವ ದಂಪತಿಗಳಿಗೆ ಶುಭ ಹಾರೈಸಿದರು.

ನಿನ್ನೆ ಮದುವೆ ಸಮಾರಂಭ ನಡೆದಿದ್ದು, ಇಂದು ಆರತಕ್ಷತೆ ಸಮಾರಂಭ ನಡೆಯಲಿದೆ. ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಮಟ್ಟದ ಹಲವು ನಾಯಕರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಕೆಲವು ಚಿತ್ರಗಳು ಇಲ್ಲಿವೆ ನೋಡಿ

Spread the love

Related Articles

Leave a Reply

Your email address will not be published. Required fields are marked *

Back to top button