Breaking NewsLatestಜಿಲ್ಲಾ ಸುದ್ದಿರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ
ಪ್ರಮೋದ್ ಮುತಾಲಿಕ್’ ಗೆ ಜೀವ ಬೆದರಿಕೆ ಕರೆ

ಧಾರವಾಡ : ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಪುತ್ತರು ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದು, ಪ್ರಮೋದ್ ಮುತಾಲಿಕ್ ಮನೆಗೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ.
ಮುಸ್ಲಿಂ ಪ್ರತ್ಯೇಕ ಕಾಲೇಜು ಸ್ಥಾಪನೆ ವಿರೋಧಿಸಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ವಾಟ್ಸಪ್ ಮೂಲಕ ಪುನೀತ್ ಕೆರೆಹಳ್ಳಿ ಸೇರಿ ಹಲವರ ಹೆಸರು ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿದ್ದಾನೆ.
ಮೊಹಮ್ಮದ್ ಆಸೀಫ್ ಹೆಸರಿನ ಸಿಮ್ ಕಾರ್ಡ್ ನಿಂದ ಜೀವ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಕರೆ ಹಿನ್ನೆಲೆ ಮುತಾಲಿಕ್ ಅವರ ಧಾರವಾಡದ ಮನೆಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.
