Breaking Newsಉತ್ತರ ಕನ್ನಡಜಿಲ್ಲಾ ಸುದ್ದಿ

ಭಟ್ಕಳ : ಜುಲೈ 31 ರಂದು ಪತ್ರಿಕಾ ದಿನಾಚರಣೆ ಮತ್ತು ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ ಸಮಾರಂಭ

ಕಾರವಾರ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್, ಉತ್ತರಕನ್ನಡ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಾಗೂ ರಾಜ್ಯಮಟ್ಟದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 31 ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಭಟ್ಕಳದ ಕಮಲಾವತಿ ರಾಮನಾಥ ಶಾನಭಾಗ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಭಟ್ಕಳ ಶಾಸಕ ಸುನೀಲ್ ನಾಯ್ಕ ಉದ್ಘಾಟಿಸಲಿದ್ದಾರೆ. ಹರ್ಮನ್ ಮೊಗ್ಲಿಂಗ್ ಪ್ರಶಸ್ತಿಯನ್ನು ಬಾಲಾಜಿ ಮೀಡಿಯಾ ಗ್ರೂಪ್ ನ ಪ್ರಧಾನ ಸಂಪಾದಕ ಶಶಿಧರ್ ಭಟ್ ಅವರಿಗೆ ನೀಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಟ್ಕಳದ ಉಪವಿಭಾಗಾಧಿಕಾರಿ ಮಮತಾ ದೇವಿ ಎಸ್, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ರಾಜ್ಯ ಪ್ರತಿನಿಧಿ ಶ್ರೀಮತಿ ಶಿವಾನಿ ಶಾಂತಾರಾಮ, ಭಟ್ಕಳ ಎಜ್ಯುಕೇಶನ್‌ನ ರಾಜೇಶ ನಾಯಕ ಉಪಸ್ಥಿತರಿರುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ರಾಜ್ಯಾಧ್ಯಕ್ಷ ನಾರಾಯಣ ಬಿ. ಬೆಂಗಳೂರು ಇವರು ವಹಿಸಲಿದ್ದಾರೆ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಜಿಲ್ಲಾದ್ಯಕ್ಷ ಮನಮೋಹನ ನಾಯ್ಕ ಅವರು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button