ಚಿಕ್ಕಮಗಳೂರುಜಿಲ್ಲಾ ಸುದ್ದಿ

ಕೆಸರುಗದ್ದೆಯಂತಾದ ರಸ್ತೆ : ಸಸಿ ನೆಟ್ಟು ಪ್ರತಿಭಟನೆ

ಚಿಕ್ಕಮಗಳೂರು: ನಗರದ ಅನೇಕ ಬಡಾವಣೆಗಳಲ್ಲಿ ರಸ್ತೆಗಳು ಗುಂಡಿಬಿದ್ದಿವೆ. ಮಳೆಯಿಂದ ಈ ರಸ್ತೆಗಳು ಕೆಸರುಗದ್ದೆಯಂತಾಗಿವೆ. ಕೂಡಲೇ ದುರಸ್ತಿಪಡಿಸಬೇಕು ಎಂದು ಆಗ್ರಹಿಸಿ ರಸ್ತೆಮೇಲೆ ಸಸಿ ನೆಟ್ಟು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಹಮ್ಮಿಕೊಂಡಿದ್ದ ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಸಂಚಾಲಕ ಸಿಎನ್ ಅಕ್ಮಲ್ ಮಾತನಾಡಿ, ಕಳೆದ ಮೂರು ವರ್ಷಗಳಿಂದ ನಗರಸಭೆ ವ್ಯಾಪ್ತಿಯ 35 ವಾರ್ಡುಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಯುಜಿಡಿ, ಅಮೃತ್ ಕುಡಿಯುವ ನೀರು ಯೋಜನೆ ಹೆಸರಲ್ಲಿ ರಸ್ತೆಗಳನ್ನು ಅಗೆದು ಗುಂಡಿ ಮಾಡಲಾಗಿದೆ.

ಅಪಘಾತಕ್ಕೆ ಬಾಯ್ದೆರೆದಿವೆ. ಪೈಪ್​​ಲೈನ್​​​​​ ಒಡೆದು ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಕಾಲಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಜನರ ಹಣವನ್ನು ಅಭಿವೃದ್ಧಿ ಹೆಸರಲ್ಲಿ ಪೋಲು ಮಾಡಲಾಗುತ್ತಿದೆ. ಪೌರಾಯುಕ್ತರಿಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ವಹಿಸಿಲ್ಲ ಎಂದು ದೂರಿದರು.

Related Articles

Leave a Reply

Your email address will not be published. Required fields are marked *

Back to top button