ಕಲಬುರ್ಗಿಜಿಲ್ಲಾ ಸುದ್ದಿ

ಪಿಎಸ್ಐ ಪರೀಕ್ಷೆ ಅಕ್ರಮ: ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ಅರೇಸ್ಟ್

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಈಗಾಗಲೇ ಬಂಧನಕ್ಕೊಳಗಾಗಿ ನ್ಯಾಯಾಂಗ ವಶದಲ್ಲಿರುವ ಏಳು ಜನ ಆರೋಪಿಗಳನ್ನು ನ್ಯಾಯಾಲಯ ಇಂದಿನಿಂದ ಮೂರು ದಿನಗಳ ಕಾಲ ವಿಚಾರಣೆಗಾಗಿ ಸಿಐಡಿ ಸುಪರ್ದಿಗೆ ಒಪ್ಪಿಸಿದೆ…

545 ಪಿಎಸ್ಐ ನೇಮಕಾತಿ ಅಕ್ರಮ ವಿಚಾರದ ಬಗ್ಗೆ ತನಿಖೆ ಚುರುಕುಗೊಳಿಸಿರೋ ಸಿಐಡಿ ತಂಡ, ಕಳೆದ ಒಂದು ವಾರದಿಂದ ಕಲಬುರಗಿಯಲ್ಲೇ ಬೀಡು ಬಿಟ್ಟಿದ್ದಾರೆ.. ಈಗಾಗಲೇ ಏಳು ಜನರನ್ನು ಬಂಧಿಸಿದ ಸಿಐಡಿ ಇದೀಗ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶನನ್ನು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪಿಎಸ್ಐ ಅಕ್ರಮಕ್ಕೆ ಕಾರಣವಾದ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮನೆ ಮೇಲೆ ನಿನ್ನೆ ಸಿಐಡಿ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದರು. ಆ ವೇಳೆ ದಿವ್ಯಾ ಹಾಗರಗಿ ಮನೆಯಲ್ಲಿ ಇರಲಿಲ್ಲ, ಕಳೆದ ನಾಲ್ಕು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ದಿವ್ಯಾ ನಾಪತ್ತೆಯಾಗಿದ್ದಾರೆ.. PSI ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ ಮನೆಯಲ್ಲಿ ಮಹತ್ವದ ದಾಖಲೆ ಕೂಡಾ ಸಿಐಡಿ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ..

ನ್ಯಾಯಾಂಗ ವಶದಲ್ಲಿರುವ ಆರೋಪಿಗಳನ್ನು ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಕೋರಿಕೆಯನ್ನು ಮಾನ್ಯ ಮಾಡಿರುವ ಕಲಬುರಗಿ ಜಿಲ್ಲಾ ನ್ಯಾಯಾಲಯ ಮೂರು ದಿನ ಸಿಐಡಿ ಕಸ್ಟಡಿಗೆ ನೀಡಿದೆ.. ಇಂದಿನಿಂದ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆಯಲಿರುವ ಸಿಐಡಿ, ದಿವ್ಯಾ ಹಾಗರಗಿಗೆ ಸೇರಿದ ಜಿಡಿಎ ಕಾಲೋನಿಯ ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರಕ್ಕೆ ಆರೋಪಿಗಳನ್ನು ಕರೆದೊಯ್ದು, ಹೇಗೆಲ್ಲಾ ಅಕ್ರಮ ಮಾಡಿದ್ದಾರೆ, ಯಾರೆಲ್ಲಾ ಸಹಕಾರ ನೀಡಿದ್ದಾರೆ ಅನ್ನೋ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button