ರಾಮನಗರ
ರಾಮನಗರ: ಜಿಲೆಟಿನ್ ಸ್ಫೋಟ ತನಿಖೆ ಚುರುಕು

ರಾಮನಗರ: ಜಿಲೆಟಿನ್ ಸ್ಪೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳಕ್ಕೆ ರಾಮನಗರ ಉಪವಿಭಾಗಾಧಿಕಾರಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
ರಾಮನಗರ ಎಸಿ ಮಂಜುನಾಥ್ ಹಾಗೂ ಕನಕಪುರ ತಹಶೀಲ್ದಾರ್ ವಿಶ್ವನಾಥ್ ಹಾಗೂ ತನಿಖಾ ತಂಡ ಘಟನೆ ನಡೆದ ಸ್ಥಳಕ್ಕೆ ಭೇಟಿ ಪರಿಶೀಲನೆ ನಂತರ, ಶ್ರೀ ಮಠದ ಸ್ವಾಮೀಜಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಮಠದ ಶ್ರೀ ಮುಮ್ಮಡಿ ಶಿವರುದ್ರಮಹಾ ಸ್ವಾಮೀಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ನಿನ್ನೆಯಷ್ಟೆ ಮರಳೇಗವಿ ಮಠದ ಬಳಿ ಜಿಲೆಟಿನ್ ಸ್ಫೋಟಗೊಂಡು ಮಹೇಶ್ ಎಂಬುವರು ಮೃತಪಟ್ಟಿದ್ದರು.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನಲ್ಲಿರುವ ಮರಳೇಗವಿ ಮಠ ಇದ್ದು, ಮೃತ ವ್ಯಕ್ತಿ ಮಹೇಶ್ ನನ್ನೇ ಆರೋಪಿಯನ್ನಾಗಿ ಪ್ರಕರಣ ದಾಖಲು ಮಾಡಲಾಗಿದೆ.
ಟೂಲ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಜಲೆಟಿನ್ ಹೇಗೆ ಸಾಗಿಸುತ್ತಿದ್ದ ಎಂಬ ಅನುಮಾನ ಇದೆ. ಈ ಹಿನ್ನೆಲೆಯಲ್ಲಿ ಸ್ಪೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸಾತನೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




