ರಾಮನಗರ

ಎಸ್.ರವಿ ಗೆಲುವಿಗೆ ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ರಾಮನಗರ: ಮೇಲ್ಮನೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ ಮೂರನೇ ಬಾರಿಗೆ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚನ್ನಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿದರು.

ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿವಿತರಿಸಿ ಎಸ್.ರವಿ ಗೆಲುವನ್ನು ಸಂಭ್ರಮಿಸಿದ ಪಕ್ಷದ ಕಾರ್ಯಕರ್ತರು, ಈ ಗೆಲುವಿನ ಮೂಲಕ ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವು ಮತ್ತಷ್ಟು ಬಲಿಷ್ಟವಾಗಿರುವುದು ಸಾಭೀತಾಗಿದೆ ಎಂದು ಅಭಿಪ್ರಾಯಪಟ್ಟ ಪಕ್ಷದ ಕಾರ್ಯಕರ್ತರು ಇದಕ್ಕೆ ಕಾರಣವಾದ ಮತದಾರರು ಮತ್ತು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ಅಭಿನಂದಿಸಿದರು.

ವಿಧಾನಪರಿಷತ್ ಸದಸ್ಯರಾಗಿ ಮೂರನೇ ಬಾರಿಗೆ ಆಯ್ಕೆಯಾಗಿರುವ ಎಸ್.ರವಿ ಅವರು, ತಮ್ಮ ಅಧಿಕಾರವಧಿಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂಧಿಸಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಮತ ನೀಡಿ ಅವರನ್ನು ಜಯಶೀಲರಾಗಿಸಿದ ಎಲ್ಲಾ ಮತದಾರರಿಗೆ ಹಾಗೂ ಅವರ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕುಕ್ಕುಟ ಮಹಾಮಂಡಲ ಅಧ್ಯಕ್ಷ ಡಿ.ಕೆ.ಕಾಂತರಾಜು, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಆರ್.ಪ್ರಮೋದ್, ಪಕ್ಷದ ಮುಖಂಡರಾದ ಸಂಕಲಗೆರೆ ಕೃಷ್ಣಪ್ಪ, ಅಕ್ಕೂರು ಶೇಖರ್, ಪಿ.ಡಿ.ರಾಜು, ರಾಮಸ್ವಾಮಿ, ನಾಗವಾರ ಬಿಳಿಯಪ್ಪ, ಪರೀದ್‌ಖಾನ್ ಘೋರಿ, ನಗರಸಭಾ ಸದಸ್ಯ ಲಿಯಾಖತ್ ಆಲಿಖಾನ್ ಇನ್ನೂ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button