ಕಲಬುರ್ಗಿಜಿಲ್ಲಾ ಸುದ್ದಿ

ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

ಕಲಬುರಗಿ: ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಅನ್ಯ ಕೋಮಿನ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆಂಬ ಆರೋಪ ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೇಳಿಬಂದಿದೆ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ವಿವಿಯ ಆವರಣದಲ್ಲಿ ನಿನ್ನೆ ರಾಮನವಮಿ ಆಚರಿಸಲಾಗಿದ್ದು, ಈ ವೇಳೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ವಿಶ್ವನಾಥ, ನರೇಂದ್ರ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿದ್ಯಾರ್ಥಿಗಳಿಬ್ಬರು ಎಬಿವಿಪಿ ಸಂಘಟನೆಗೆ ಸೇರಿದವರಾಗಿದ್ದಾರೆ. ಹೀಗಾಗಿ ಘಟನೆ ಖಂಡಿಸಿ ಇಂದು ಎಬಿವಿಪಿ ವಿವಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button