ಕೊಡಗುಕ್ರೈಂಜಿಲ್ಲಾ ಸುದ್ದಿ

ನಕ್ಷತ್ರ ಆಮೆ ಮಾರಾಟ ಯತ್ನ: ಇಬ್ಬರ ಬಂಧನ

ಮಡಿಕೇರಿ : ಅಳಿವಿನ ಅಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಬಂಧಿಸಿದ್ದಾರೆ.

ಅಪ್ರೋಜ್ ಪಾಷಾ ಮತ್ತು ಮನ್ಸೂರ್ ಎಂಬುವವರನ್ನ ಬಂಧಿಸಿದ್ದು, ಒಂದು  ನಕ್ಷತ್ರ ಆಮೆಯನ್ನ ರಕ್ಷಿಸಲಾಗಿದೆ.

ಆರೋಪಿಗಳು ಶುಕ್ರವಾರ ಸಂಜೆ ವೇಳೆ ನಗರದ ಚೈನ್ ಗೇಟ್ ಬಳಿ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಡಿಕೇರಿಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಂದರ್ಭ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಆರೋಪಿಗಳ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅಧೀಕ್ಷಕ ಚಂದ್ರಕಾoತ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಸಿ.ಯು. ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ್, ಸ್ವಾಮಿ, ಮಂಜುನಾಥ್ ಕಾರ್ಯಾಚರಣೆ ನಡೆಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button