ಜಿಲ್ಲಾ ಸುದ್ದಿ
ಕಾಂಗ್ರೆಸ್ನಿಂದ ಕೊರೊನಾ ವಾರಿಯರ್ಸ್ ಮತ್ತು ಅಂಗವಿಕಲರಿಗೆ ದಿನಸಿ ಕಿಟ್ ವಿತರಣೆ

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕು ಕುಂದಾಣ ಹೋಬಳಿಯ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ ಮತ್ತು ಅಂಗವಿಕಲರಿಗೆ ಕಾಂಗ್ರೆಸ್ ವತಿಯಿಂದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.
ಕೊರೊನಾ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಂಕಷ್ಟದಲ್ಲಿರು ಕೊರೊನಾ ವಾರಿಯರ್ ಮತ್ತು ಅಂಗವಿಕಲರಿಗೆ ದಿನಸಿ ಪದಾರ್ಥಗಳು ಮತ್ತು ಅಗತ್ಯ ವಸ್ತುಗಳನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆಸಿ ಮಂಜುನಾಥ್ ಅವರ ನೇತೃತ್ವದಲ್ಲಿ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್, ಕಾಂಗ್ರೆಸ್ ಮುಖಂಡರಗಳು ಗ್ರಾಮ ಪಂಚಾಯಿತಿ ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಶೀಲಮ್ಮ ಮತ್ತು ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.




