ಜಿಲ್ಲಾ ಸುದ್ದಿಮಂಡ್ಯ
ನಟ ದರ್ಶನ್ ಗೆ ಶ್ರೀಮಂತಿಕೆಯ ದರ್ಪ: ಎಂ. ವೆಂಕಟಸ್ವಾಮಿ ಆರೋಪ

ಮಂಡ್ಯ : KRS ಡ್ಯಾಂ ಸುತ್ತಮುತ್ತ ಅಕ್ರಮ ಗಣಿಗಾರಿಕೆಯನ್ನು ಈ ಕೂಡಲೇ ನಿಷೇಧಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ ಅಗ್ರಹಿಸಿದರು.
ಅವರು ಇಂದು ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿ ಮಾತನಾಡಿ, ಈ ಕೂಡಲೇ ಸರ್ಕಾರ KRS ಸುತ್ತಮುತ್ತಲ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇದಿಸುವ ಮೂಲಕ ಅಣೆಕಟ್ಟೆಯನ್ನು ಉಳಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ಈಗಾಗಲೇ ಕೆ.ಆರ್.ಎಸ್.ಡ್ಯಾಂ ಬಿರುಕಿನ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಧ್ವನಿ ಎತ್ತಿದ್ದಾರೆ. ಆದರೆ ಅವರ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಶಾಸಕರು ವಾಗ್ದಾಳಿ ನಡೆಸಿದ್ದಾರೆ. ಸುಮಲತಾ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ. ತಕ್ಷಣವೇ ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆ ಬಗ್ಗೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.




