ಜಿಲ್ಲಾ ಸುದ್ದಿಬೆಳಗಾವಿ

Election Campaign: ಕಾಂಗ್ರೆಸ್ ಅಭ್ಯರ್ಥಿಗಳ ಪರ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್ ಪ್ರಚಾರ

ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರ ಇಂದು (ಭಾನುವಾರ) ಸಂಜೆ ಕಾಂಗ್ರೆಸ್ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಎಂ.ಬಿ. ಪಾಟೀಲ್, ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಇಲ್ಲಿನ ಮಹಾಂತೇಶ ನಗರ ಹಾಗೂ ರಾಮತೀರ್ಥ ನಗರದಲ್ಲಿ ಮತಯಾಚನೆ ಮಾಡಿದ ಮುಖಂಡರು, ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಪಾಲಿಕೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೇ ಶೇ.50 ರಷ್ಟು ಆಸ್ತಿ ತೆರಿಗೆ ರಿಯಾಯಿತಿ ನೀಡಲಾಗುವುದು. ಕೋವಿಡ್ ನಿಂದ ಸಂಕಷ್ಟಕ್ಕೀಡಾಗಿರುವ ವ್ಯಾಪಾರಿಗಳು, ವಾಹನ ಚಾಲಕರು ಸೇರಿ ಎಲ್ಲ ಶ್ರಮಿಕ ವರ್ಗದವರಿಗೆ 5 ಸಾವಿರ ರೂ. ಪರಿಹಾರ ಕೊಡಲಾಗುವುದು. ನಗರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಎಂದು ಮುಖಂಡರು ಭರವಸೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button