ಉಡುಪಿಜಿಲ್ಲಾ ಸುದ್ದಿ

ಉಡುಪಿಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿದ ಕಾರಣಕ್ಕೆ ತರಗತಿಗಳು ಆರಂಭವಾಗಿಲ್ಲ: ಸಚಿವ ಸುನೀಲ್ ಕುಮಾರ್

ಉಡುಪಿ : ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿದ ಕಾರಣಕ್ಕೆ ತರಗತಿಗಳು ಆರಂಭವಾಗಿರಲಿಲ್ಲ ಹಾಗೂ ಇದೀಗ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಇದೊಂದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಸಚಿವ ವಿ ಸುನೀಲ್​​ ಕುಮಾರ್​ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಲ್ಲಿ ಪಾಸಿಟಿವಿಟಿ ರೇಟ್ ಶೇ. 1.4 ಇದೆ ಆದ್ದರಿಂದ ಈ ಹಿನ್ನೆಲೆಯಲ್ಲಿ ಶಾಲಾರಂಭ ಮಾಡುತ್ತೇವೆ ಮತ್ತು
9ನೇ ತರಗತಿ ಯಿಂದ ದ್ವಿತೀಯ ಪಿಯು ವರೆಗೆ ಶಾಲಾರಂಭವಾಗಲಿದೆ ಈ ಬಗ್ಗೆ ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ. ಸೆಪ್ಟಂಬರ್ 1ರಿಂದ ತರಗತಿಗಳು ಆರಂಭವಾಗಲಿದೆ. ಶಿಕ್ಷಕರಿಗೆ ಲಸಿಕೆ ಕಡ್ಡಾಯವಾಗಿ ಹಾಕುಸಬೇಕು ಹಾಗೂ ಕೋವಿಡ್ ನಿಯಮಾವಳಿ ಅರ್ಥೈಸಿಕೊಂಡು ತರಗತಿ ಆರಂಭಿಸಿ ಎಂದರು.

ತಜ್ಞರ ಅಭಿಪ್ರಾಯ ನೋಡಿ ಗಣೇಶ ಹಬ್ಬದ ಆಚರಣೆಗೆ ಅವಕಾಶ:

ಗಣೇಶ ಹಬ್ಬದ ಆಚಣೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನೀಡಿದ್ದು ರಾಜ್ಯದಲ್ಲಿ ಗಣೇಶೋತ್ಸವ ಆಚರಣೆ ಬಗ್ಗೆ ಜನರ ಬೇಡಿಕೆ ಇದೆ ಹಾಗೂ ಜನರ ಬೇಡಿಕೆ ಸರಿಯಾಗಿದೆ ಆದರೆ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಮತ್ತು ಕೇಂದ್ರ ಸರ್ಕಾರದ ಸೂಚನೆ ನೋಡಬೇಕು ತಜ್ಞರು ಹೇಳಿರುವ ವಿಚಾರಗಳನ್ನು ಗಮನಿಸಬೇಕು ನಂತರ ತಜ್ಞರ ಅಭಿಪ್ರಾಯ ನೋಡಿ ಗಣೇಶ ಹಬ್ಬದ ಆಚರಣೆಗೆ ಅವಕಾಶ ನೀಡುತ್ತೇವೆ ಎಂದರು ಹಾಗೂ ಇದನ್ನು ಅರ್ಥ ಮಾಡಿಕೊಂಡು ಜನರು ಸಹಕರಿಸಬೇಕು ಎಂದು ಸಚಿವರು ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button