ಉಡುಪಿಜಿಲ್ಲಾ ಸುದ್ದಿ
ಉಡುಪಿ: ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

ಉಡುಪಿ: ಮನೆಯಲ್ಲಿ ನೇಣು ಬಿಗಿದುಕೊಂಡು ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉಡುಪಿಯ ಬನ್ನಂಜೆ ಗರಡಿ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ದೀಪಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆಯ ಕುಟುಂಬ ಉಡುಪಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಬಾಲಕಿ ಸ್ಥಳೀಯ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಈಕೆ ಅನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ.
ನಗರ ಪೊಲೀಸ್ ಠಾಣೆ ನಿರೀಕ್ಷಕ ಪ್ರಮೋದ್ ಕುಮಾರ್ ಸ್ಥಳದಲ್ಲಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷೆಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲು ನಿತ್ಯಾನಂದ ಒಳಕಾಡು ಸಹಕರಿಸಿದರು.




