ಕೊಡಗುಜಿಲ್ಲಾ ಸುದ್ದಿ

ಕೊಡಗಿನಲ್ಲಿ ಸೆಪ್ಟೆಂಬರ್ 17 ರಿಂದ ಶಾಲಾ – ಕಾಲೇಜುಗಳು ಪ್ರಾರಂಭ

ಕೊಡಗು : ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆ ಇರುತ್ತದೆ. ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಹಾಲಿ ಇರುವ ಪಾಸಿಟಿವಿಟಿ ದರವನ್ನು ಗಮನದಲ್ಲಿರಿಸಿಕೊಂಡು, ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಸುತ್ತೋಲೆಯನ್ನು ಆಧರಿಸಿ, ಕೊಡಗು ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ/ತಾಂತ್ರಿಕ/ ಡಿಪ್ಲೊಮಾ ಕಾಲೇಜುಗಳ ಸ್ನಾತಕೋತ್ತರ ತರಗತಿಗಳನ್ನು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿನ 9 ಮತ್ತು 10ನೇ ತರಗತಿಗಳನ್ನು ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಸೆ.17 ರಿಂದ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ.

ಹಿಂದುಳಿದ, ಅಲ್ಪ ಸಂಖ್ಯಾತರ, ಸಮಾಜ ಕಲ್ಯಾಣ ಇತ್ಯಾದಿ ಇಲಾಖೆಗಳ ಹಾಸ್ಟೆಲ್ಗಳ ಅಧಿಕಾರಿ / ಸಿಬ್ಬಂದಿಗಳು ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರತಕ್ಕದ್ದು, ಶಾಲಾ ಕಾಲೇಜು, ವಿದ್ಯಾ ಸಂಸ್ಥೆ ಮತ್ತು ಹಾಸ್ಟೆಲ್ಗಳನ್ನು ನಿಯಮಾನುಸಾರ ಸ್ಯಾನಿಟೈಸ್ ಮಾಡುವುದು.

ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರತಕ್ಕದ್ದು. ಪದವಿ ಮತ್ತು ಅದಕ್ಕೆ ಮೇಲ್ಪಟ್ಟ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರತಕ್ಕದ್ದು. ವಿದ್ಯಾರ್ಥಿಗಳ ಪಾಲಕರು ಕೋವಿಡ್-19 ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳುವುದು.

ಶಾಲೆ ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನದಂತೆ ನಿಯಮಾನುಸಾರ ಈ ಆದೇಶವು ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನೀಡುವ ನಿರ್ದೇಶನಗಳಿಗೆ ಒಳಪಟ್ಟಿರುತ್ತದೆ. ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಬದಲಾವಣೆಗಳನ್ನು ಜಿಲ್ಲಾಡಳಿತವು ಮುಂದಿನ ದಿನಗಳಲ್ಲಿ ನೀಡಲಿದೆ.

Related Articles

Leave a Reply

Your email address will not be published. Required fields are marked *

Back to top button