ಜಿಲ್ಲಾ ಸುದ್ದಿಮೈಸೂರು

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಮೈಸೂರು: ಐಪೋನ್ ಕೊಡಿಸಿಲ್ಲವೆಂದು ಮನೆಯವರ ಜೊತೆ ಮುನಿಸಿಕೊಂಡು ವಾರದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಇಂದು ಪತ್ತೆಯಾಗಿದೆ. ಮೃತ 17 ವರ್ಷದ ವಿದ್ಯಾರ್ಥಿ ನಾಗೇಶ್ ಶವ ಪತ್ತೆಯಾಗಿತ್ತು ಕುಟುಂಬಸ್ಥರು ಕೊಲೆ ಎಂದು ಆರೋಪ ಮಾಡ್ತಿದ್ದಾರೆ.

ಮೈಸೂರಿನ ಹೊರ ವಲಯದಲ್ಲಿರುವ ಇಲವಾಲ ನಿವಾಸಿ ನಾಗೇಶ್ ಬಹಳ ದಿನದಿಂದ ಐ ಫೋನ್ ಖರೀದಿ ಮಾಡಬೇಕು ಎಂಬ ಆಸೆ ಹೊಂದಿದ್ದ. ಈ ಬಗ್ಗೆ ಪೋಷಕರ ಬಳಿ ಕೇಳಿದಾಗ ಅಷ್ಟೊಂದು ದುಬಾರಿ ಬೆಲೆಯ ಫೋನ್ ಏಕೆ ಎಂದು ನಿರಾಕರಿಸಿದ್ದರು. ಹೀಗಾಗಿ ನಾಗೇಶ್ ಪೋಷಕರೊಂದಿಗೆ ಮುನಿಸಿಕೊಂಡಿದ್ದು ಐ ಫೋನ್ ಖರೀದಿಸಲು ತಾನೇ ಹಣ ಹೊಂದಿಸುತ್ತಿದ್ದ.

ಆದರೆ ವಾರದ ಹಿಂದೆ ಏಕಾಏಕಿ ನಾಗೇಶ್ ನಾಪತ್ತೆಯಾಗಿದ್ದ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಲಾಗಿತ್ತು. ಆದ್ರೆ ಇಂದು ವಿದ್ಯಾರ್ಥಿ ನಾಗೇಶ್ ಶವವಾಗಿ ಕೆರೆಯಲ್ಲಿ ಪತ್ತೆಯಾಗಿದ್ದಾನೆ. ಈ ಸಂಬಂಧ ಪೋಷಕರು ನಾಗೇಶ್ ಹೊಂದಿಸಿದ್ದ ಹಣಕ್ಕಾಗಿ ಸ್ನೇಹಿತರೇ ಕೊಲೆ ಮಾಡಿರಬೇಕು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button