ಜಿಲ್ಲಾ ಸುದ್ದಿಬಾಗಲಕೋಟೆ
ಹಾವು ಕಚ್ಚಿ ಬಾಗಲಕೋಟೆ ಮೂಲದ ಯೋಧ ಕಾಶ್ಮೀರದಲ್ಲಿ ಸಾವು

ಬಾಗಲಕೋಟೆ: ಹಾವು ಕಚ್ಚಿ ಬಾಗಲಕೋಟೆ ಜಿಲ್ಲೆಯ ಮೂಲದ ಯೋಧನೊಬ್ಬ ಸಾವನ್ನಪ್ಪಿದ ಘಟನೆ ಜಮ್ಮು ಕಾಶ್ಮೀರದಲ್ಲಿ ಬುಧವಾರ ರಾತ್ರಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಚಿದಾನಂದ ಚನ್ನಬಸಪ್ಪ ಹಲಕುರ್ಕಿ(ಶಿರಸ್ಥಾರ)(೨೫) ಮೃತಪಟ್ಟ ದುರ್ದೈವಿ. ಈತ ಇಂಡಿಯನ್ ಆರ್ಮಿ(ಮರಾಠಾ ರೆಜಿಮೆಂಟ ಸೈನಿಕ)ನಾಗಿ ಕಳೆದ 6 ವರ್ಷ 9 ತಿಂಗಳಿನಿ0ದ ಕರ್ತವ್ಯ ನಿರ್ವಹಿಸುತ್ತಿದ್ದನು. ಆಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ಹಾವು ಕಚ್ಚಿ ಮೃತಪಟ್ಟಿದ್ದಾನೆ.
ಮೃತ ಯೋಧ ಚಿದಾನಂದನಿಗೆ ಒಬ್ಬ ಸಹೋದರ, ತಾಯಿ ರತ್ನಮ್ಮ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾನೆ. ಯೋಧನ ಕುಟುಂಬದಲ್ಲಿ ಶೋಕ ಮಡುಕಟ್ಟಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಯೋಧನ ಪಾರ್ಥಿವ ಶರೀರ ಶುಕ್ರವಾರ ಅಥವಾ ಶನಿವಾರ ಸ್ವಗ್ರಾಮಕ್ಕೆ ಬರುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.




