Latestಜಿಲ್ಲಾ ಸುದ್ದಿಮೈಸೂರು

ತನ್ನ ಮಗನನ್ನೇ ಹತ್ಯೆ ಮಾಡಿದ್ದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ಮೈಸೂರು : ತನ್ನ ಮಗನನ್ನೇ ತಾನು ಹತ್ಯೆ ಮಾಡಿದ್ದ ಮಾನಸಿಕ ಅಸ್ವಸ್ಥೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೆಚ್ ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಯಡತೊರೆ ಗ್ರಾಮದ ನಿವಾಸಿ ಮಾನಸಿಕ ಅಸ್ವಸ್ಥೆ ಭವಾನಿ ಎಂಬುವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈಕೆ ನಾಲ್ಕೈದು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ಹೆತ್ತ 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನ ಮನಬಂದಂತೆ ಮಚ್ಚಿನಿಂದ ಕೊಚ್ಚಿ ಸಾಯಿಸಿ ಪರಾರಿಯಾಗಿದ್ದಳು.

ಈ ಬಗ್ಗೆ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಎಲ್ಲೋ ತಲೆಮರೆಸಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ, ಇದೀಗ ಮೇಟಿಕುಪ್ಪೆ ಕೆರೆಯಲ್ಲಿ ಈಕೆಯ ಮೃತದೇಹ ಪತ್ತೆಯಾಗಿದೆ.

ತನ್ನ ಮಗನನ್ನು ಕೊಂದ ಘಟನೆಯಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ‌. ಮಾನಸಿಕ ಅಸ್ವಸ್ಥೆಯಾಗಿದ್ದು, ತನ್ನ ಮಗನನ್ನೇ ತಾನು ಹತ್ಯೆ ಮಾಡಿದ್ದಕ್ಕೆ ಪಶ್ಚಾತ್ತಾಪ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.

Related Articles

Leave a Reply

Your email address will not be published. Required fields are marked *

Back to top button