ಜಿಲ್ಲಾ ಸುದ್ದಿಮೈಸೂರು

ಸೆ.27ರ ಭಾರತ್‌ ಬಂದ್‌ಗೆ ಬೆಂಬಲ: ಕುರುಬೂರು ಶಾಂತಕುಮಾರ್‌

ಮೈಸೂರು : ಕೇಂದ್ರ ಕೃಷಿ ಕಾಯ್ದೆಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಸೆ.27ರಂದು ಭಾರತ್‌ ಬಂದ್‌ಗೆ ಕರೆ ನೀಡಿದ್ದು, ರಾಜ್ಯ ರೈತ ಸಂಘಟನೆಗಳ ಒಕ್ಕೂಟವೂ ಬೆಂಬಲ ಸೂಚಿಸಲಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ. ಆದರೆ, ಕೇಂದ್ರ ಸರ್ಕಾರ ತನ್ನ ಪಟ್ಟು ಬಿಟ್ಟಿಲ್ಲ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌, ರಸಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಇದರಿಂದ ಜನಸಾಮಾನ್ಯರ ಜೀವನದ ಮೇಲೆ ಹೊಡೆತ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕು. ಕಬ್ಬು ಬೆಳೆಗಾರಿಗೆ ನ್ಯಾಯಾ ಸಿಗಬೇಕು. ಕಬ್ಬಿನ ಬೆಲೆ ಪರಿಷ್ಕರಣೆ ಆಗಬೇಕಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button