ಜಿಲ್ಲಾ ಸುದ್ದಿದಾವಣಗೆರೆ
ರಾಜ್ಯದಲ್ಲಿ ಈಗಾಗಲೇ ಪ್ರವಾಸ ಆರಂಭಿಸಿದ್ದೇನೆ: ಬಿ ಎಸ್ ಯಡಿಯೂರಪ್ಪ

ದಾವಣಗೆರೆ: ರಾಜ್ಯದಲ್ಲಿ ಈಗಾಗಲೇ ಪ್ರವಾಸ ಆರಂಭಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ನಗರದ ಜಿಎಂಐಟಿಯಲ್ಲಿ ಮಾತನಾಡಿದ ಅವರು, ಮೈಸೂರು ಭಾಗದಲ್ಲಿ ಈಗಾಗಲೇ ಭೇಟಿ ನೀಡಿದ್ದೇನೆ. ಪಕ್ಷದ ಸಂಘಟನೆಗೆ ಕೆಲಸ ಮಾಡುತ್ತಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ಪ್ರವಾಸ ನಡೆಸುತ್ತಿದ್ದೇನೆ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ತಿಳಿಸಿದ್ದಾರೆ.
135 ರಿಂದ 140 ಸೀಟ್ ಗಳನ್ನು ಗೆಲ್ಲುತ್ತೇವೆ. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ನಾನು ಮುಂದಿನ ದಿನಗಳಲ್ಲಿ ಎಲ್ಲೆಡೆ ಪ್ರವಾಸ ನಡೆಸುತ್ತೇನೆ. ಪಕ್ಷ ಮತ್ತಷ್ಟು ಬಲಪಡಿಸಲು ಯತ್ನಿಸುತ್ತೇನೆ ಎಂದು ತಿಳಿಸಿದರು.
ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಇದೆ. ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರು ಬಂದಿದ್ದಾರೆ. ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.




