ಚಿಕ್ಕಮಗಳೂರುಜಿಲ್ಲಾ ಸುದ್ದಿರಾಜಕೀಯ

ತರೀಕೆರೆಯ ಪುರಸಭೆಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರು; ಆಡಳಿತ ʼಕೈʼವಶ

ಚಿಕ್ಕಮಗಳೂರು: ತರೀಕೆರೆ ಪುರಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿದ್ದ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿದ್ದು ಪುರಸಭೆಯ ನೂತನ ಅಧ್ಯಕ್ಷರಾಗಿ ರಂಗನಾಥ್ ಹಾಗೂ ಉಪಾಧ್ಯಕ್ಷೆಯಾಗಿ ಯಶೋಧಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.

ಪುರಸಭೆಯ 23 ವಾರ್ಡ್ಗಳ ಪೈಕಿ ಕಾಂಗ್ರೆಸ್ನ 15 ಅಭ್ಯರ್ಥಿಗಳು ಜಯಗಳಿಸಿದ್ದರು. ಪಕ್ಷೇತರರು 7 ಮಂದಿ ಹಾಗೂ ಬಿಜೆಪಿ ಕೇವಲ 1 ಸ್ಥಾನದಲ್ಲಿ ಗೆದ್ದಿತ್ತು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ನೀಡಲಾಗಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button