ಕಲಬುರ್ಗಿಜಿಲ್ಲಾ ಸುದ್ದಿ
ಶಾಲಾ ಮಕ್ಕಳು, ಶಿಕ್ಷಕರಿಗೆ ಪಾಸಿಟಿವ್ : ಕಲಬುರಗಿಯ ನೀಲೂರು ಶಾಲೆ ತಾತ್ಕಾಲಿಕ ಬಂದ್

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಅಬ್ಬರಿಸುತ್ತಿದೆ. ಶಾಲಾ ಮಕ್ಕಳು, ಶಿಕ್ಷಕರು, ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದ್ದು ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ.
ಅಫಜಲಪುರ ತಾಲೂಕಿನ ನೀಲೂರು ಪ್ರೌಢ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವದು ದೃಢಪಟ್ಟಿದೆ. ನೀಲೂರು ಶಾಲೆಯ ಆರು ಜನ ಶಿಕ್ಷಕರು, ನಾಲ್ವರು ವಿದ್ಯಾರ್ಥಿಗಳಿಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ತಾತ್ಕಾಲಿಕವಾಗಿ ಶಾಲೆ ಬಂದ್ ಮಾಡಲಾಗಿದೆ.
ಕಲಬುರಗಿ ನಗರ ಪೊಲೀಸ್ ವ್ಯಾಪ್ತಿಯ ಓರ್ವ ಇನ್ಸ್ಪೆಕ್ಟರ್ ಮತ್ತು ಏಳು ಸಿಬ್ಬಂದಿಗಳಿಗೆ ಕೊರೊನಾ ಸೊಂಕು ಧೃಡಪಟ್ಟಿತ್ತು. ಇದೀಗ ಅಫಜಲಪುರ ಪಿಎಸ್ಐ, ರೇವೂರ ಠಾಣೆಯ ಪಿಎಸ್ಐ ಸೇರಿದಂತೆ ಪೊಲೀಸ್ ಇಲಾಖೆಯ ಹಲವು ಸಿಬ್ಬಂದಿಗೆ ಸೋಂಕು ತಗುಲಿದೆ.
ಸೋಂಕಿತ ಬಹುತೇಕರು ಮನೆಯಲ್ಲಿ ಹೋಂ ಐಸೋಲೇಷನ್‌ನಲ್ಲಿ ಉಳಿದು ಚಿಕಿತ್ಸೆ ಪಡೆಯುತ್ತಿದ್ದು, ಸೊಂಕಿನ ಗಂಭೀರತೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.




