Breaking Newsಉತ್ತರ ಕನ್ನಡಜಿಲ್ಲಾ ಸುದ್ದಿರಾಜಕೀಯ

ಮೂರು ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ನಳಿನ್ ಕುಮಾರ ಕಟೀಲ್​

ಕಾರವಾರ: ಮೂರು ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಭಟ್ಕಳದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದರು.

ಮೈಸೂರು ನಂಜನಗೂಡು ದೇವಾಲಯ ಕೆಡವಿರುವ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಆರೋಪಕ್ಕೆ ಉತ್ತರಿಸಿದ ಅವರು ಮೈಸೂರು ದೇವಾಲಯದ ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಮಾನವನ್ನು ಅಧಿಕಾರಿಗಳು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

ಆದರೆ ಧಾರ್ಮಿಕ ಕೇಂದ್ರಗಳನ್ನು ಒಡೆಯುವ ಮುನ್ನ ಪೂರ್ವಾಪರ ವಿಮರ್ಶೆ ನಡೆಸಬೇಕು ಎನ್ನುವುದು ಪಕ್ಷದ ನಿಲುವಾಗಿದ್ದು,ದೇವಾಲಯವನ್ನು ಉಳಿಸುವುದು ನಮ್ಮ ಬೇಡಿಕೆಯಾಗಿದೆ.ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು.

ನಂತರ ಗುಜರಾತ್ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಪ್ರತಿಕ್ರಿಯಿಸಿ ಚುನಾವಣೆ ಗೋಸ್ಕರವೇ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲು ಸಾಧ್ಯವಿಲ್ಲ, ಅದು ಪಕ್ಷದ ವರಿಷ್ಠರ ತೀರ್ಮಾನವಾಗಿದೆ ಎಂದು ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button