Latestಜಿಲ್ಲಾ ಸುದ್ದಿಶಿವಮೊಗ್ಗ

Prakash Travels Owner: ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಶವ ಪತ್ತೆ : ಕಾರಣ ಗೊತ್ತಾ?

ಶಿವಮೊಗ್ಗ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿರುವ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಇಂದು ಶವವಾಗಿ ಪತ್ತೆಯಾಗಿದ್ದಾರೆ.

ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್ ಜನವರಿ 21 ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು.ಇನ್ನು ಕುಟುಂಬಸ್ಥರು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.

ಶನಿವಾರ ಸಂಜೆ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಪ್ರಕಾಶ್ ಅವರ ಕಾರು , ಮೊಬೈಲ್ ಫೋನ್ ಪತ್ತೆಯಾಗಿತ್ತು. ಜೊತೆಗೆ ಅವರ ಚಪ್ಪಲಿ ಕೂಡ ಸಿಕ್ಕಿತ್ತು. ಹೀಗಾಗಿ ಪ್ರಕಾಶ್ ಅವರ ಶವಕ್ಕಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಇಂದು ಬೆಳಗ್ಗೆ ಅವರ ಶವಪತ್ತೆಯಾಗಿದೆ. ಆದರೆ ಅವರ ಸಾವಿಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.

ಸುಮಾರು 20 ವರ್ಷದಿಂದ ಬಸ್ ಸೇವೆ ಒದಗಿಸುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಬಸ್ ಸೇವೆ ಸ್ಥಗಿತಗೊಂಡಿದ್ದರಿಂದ ಆರ್ಥಿಕವಾಗಿ ಹಿನ್ನಡೆ ಉಂಟಾಯಿತ್ತು. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನೇನು ಪೊಲೀಸರ ತನಿಖೆ ನಂತರ ನಿಜಾಂಶ ಹೊರಗೆಬರಲಿದೆ.

Related Articles

Leave a Reply

Your email address will not be published. Required fields are marked *

Back to top button