ಚಿಕ್ಕಮಗಳೂರುಜಿಲ್ಲಾ ಸುದ್ದಿ

ಚಾರ್ಮಾಡಿ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ಧಿ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು : ವಾಹನಗಳ ಸುಗಮ ಸಂಚಾರಕ್ಕೆ ನಿರಂತರ ಅಡಚಣೆ ಉಂಟಾಗುವ ಚಾರ್ಮಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸಲು ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಚಾರ್ಮಾಡಿ ಘಾಟಿಯಲ್ಲಿ ಪ್ರತೀವರ್ಷ ಮಳೆಗಾಲದ ಸಂದರ್ಭದಲ್ಲಿ ಮಣ್ಣು ಹಾಗೂ ಗುಡ್ಡ ಕುಸಿಯುವುದರಿಂದ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿಯಾಗಬೇಕಿದೆ. ರಸ್ತೆ ಅಗಲೀಕರಣಕ್ಕಾಗಿ ಅರಣ್ಯ ಇಲಾಖೆಯೊಂದಿಗೆ ಈ ಕುರಿತು ಚರ್ಚೆ ನಡೆಸಿ, ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಪ್ರಯತ್ನ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟತೆ ದೊರೆಯಲಿದೆ ಎಂದರು

Related Articles

Leave a Reply

Your email address will not be published. Required fields are marked *

Back to top button