ಚಿಕ್ಕಮಗಳೂರುಜಿಲ್ಲಾ ಸುದ್ದಿ
ಶೃಂಗೇರಿ; ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ರಾವಕ ಘಟನೆ ಶೃಂಗೇರಿಯ ಮಕ್ಕಿಮನೆ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಕ್ಕಿಮನೆ ಗ್ರಾಮದ ಸುಧಾಕರ ಎಂಬವರ ಕುಟುಂಬದ ವೀಣಾ (49), ಶಾರದಮ್ಮ (70) ಶ್ರಾವ್ಯ (15) ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.
ವೀಣಾ ಅಂಗನವಾಡಿ ಶಿಕ್ಷಕಿಯಾಗಿದ್ದರು. ಪುತ್ರಿ ಶ್ರಾವ್ಯ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಸೋಮವಾರ ಬೆಳಗ್ಗೆ ಅಂಗನವಾಡಿಯ ಪೂರ್ಣಿಮಾ ಎಂಬವರು ವೀಣಾಗೆ ಕರೆ ಮಾಡಿದಾಗ ಪ್ರತಿಕ್ರಿಯೆ ಬರಲಿಲ್ಲ. ಬಳಿಕ ಮನೆಯ ಬಳಿ ಸ್ಥಳೀಯರು ಗಮನಿಸಿದಾಗ ಬಾಗಿಲು ಹಾಕಿಕೊಂಡಿತ್ತು. ಹೀಗಾಗಿ ಮನೆಯ ಹೆಂಚು ತೆಗೆದು ನೋಡಿದಾಗ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಇವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.




