ಕಲಬುರ್ಗಿಜಿಲ್ಲಾ ಸುದ್ದಿ

ಓಮಿಕ್ರಾನ್ ಆತಂಕ: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಚೆಕ್‌ಪೋಸ್ಟ್ ನಿರ್ಮಾಣ

ಕಲಬುರಗಿ: ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕ ಹಿನ್ನಲೆ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನಲೆ ಮಹಾರಾಷ್ಟ್ರ- ಕರ್ನಾಟಕ ಗಡಿಭಾಗದ ಕಲಬುರಗಿ ಜಿಲ್ಲೆಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ, ಅಫಜಲಪುರ ತಾಲೂಕಿನಲ್ಲಿ‌ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಆದ್ರೆ ಚಕ್ ಪೊಸ್ಟ್ ನಿರ್ಮಾಣ ಮಾಡಲಾಯಿಗಿದೆ. ಆದರೆ, ಅದು ಕಾಟಾಚಾರಕ್ಕೆ ಎಂಬತೆ ಗೋಚರಿಸುತ್ತಿದೆ‌‌. ಮಹಾರಾಷ್ಟ್ರದಿಂದ ಬಿಂದಾಸ್ ಆಗಿ ವಾಹನಗಳು ರಾಜ್ಯಕ್ಕೆ ಎಂಟ್ರಿ ಕೊಡ್ತಿವೆ. ಚಕ್ ಪೋಸ್ಟ್ ನಲ್ಲಿ ಕೇವಲ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ಮಾತ್ರ ನಿಯೋಜನೆ ಮಾಡಲಾಗಿದೆ. ಆರೋಗ್ಯ ಸಿಬ್ಬಂದಿಗಳಾಗಲಿ ಹಿರಿಯ ಅಧಿಕಾರಿಗಳು ಯಾರೊಬ್ಬರೂ ಇಲ್ಲಿ ಕಾಣಿಸುತ್ತಿಲ್ಲ. ಹೀಗಾಗ ಚೆಕ್ ಪೊಸ್ಟ್ ನಲ್ಲಿ ಹೇಳೊರು, ಇಲ್ಲ ಕೆಳೋರು ಇಲ್ಲ ಎಂಬಂತಾಗಿದೆ. ಇದು ಜಿಲ್ಲಾಡಳಿತದ ನಿರ್ಲಕ್ಷ್ಯ ಎದ್ದು ಕಾಣಿತ್ತಿದೆ. ರಾಜ್ಯ ಸರ್ಕಾರದ ಸೂಚನೆಯ ಬಳಿಕವು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದಿರಿವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ‌.

ಕಳೆದ ಬಾರಿ ಮಹಾರಾಷ್ಟ್ರದಿಂದ ಅತಿ ಜನ ಆಗಮಿಸಿದರಿಂದಲೇ ಕೊರೊನಾ ಸ್ಪೋಟಗೊಂಡು ನಿಯಂತ್ರಣಕ್ಕೆ ತರಲಾಗದೆ ಹಲವು ಸಾವು ನೋವುಗಳನ್ನು ಅನುಭವಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. ಈಗಲೂ ಸಹ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದರೆ ಮತ್ತೆ ಜಿಲ್ಲೆಗೆ ಗಂಡಾಂತರ ತಪ್ಪದು.

Spread the love

Related Articles

Leave a Reply

Your email address will not be published. Required fields are marked *

Back to top button