ಉತ್ತರ ಕನ್ನಡಜಿಲ್ಲಾ ಸುದ್ದಿ
ಗೋಕರ್ಣ ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ನಾಪತ್ತೆ

ಕಾರವಾರ : ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಬೆಂಗಳೂರು ಮೂಲದ ರವಿ ನಂದನ್ (23) ಸಮುದ್ರದಲ್ಲಿ ಕಾಣೆಯಾದ ಯುವಕನಾಗಿದ್ದಾನೆ.
ಭಾನುವಾರ ಬೆಂಗಳೂರಿನಿಂದ ಐದು ಜನ ಯುವಕರು ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇವರಲ್ಲಿ ರವಿ ನಂದನ್ ಸಮುದ್ರದಲ್ಲಿ ಈಜಾಡಲು ತೆರಳಿದ್ದಾನೆ. ಈ ವೇಳೆ ಅಲೆಗಳ ರಭಸಕ್ಕೆ ಈತ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾನೆ.
ಗೋಕರ್ಣ ಪೊಲೀಸರು ಈತನಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ ಈ ವರೆಗೆ ಯಾವುದೇ ಸುಳಿವು ದೊರೆತಿಲ್ಲ.ಬಹುತೇಕ ಈತ ಮೃತನಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




