Latestಉಡುಪಿಜಿಲ್ಲಾ ಸುದ್ದಿ

ಟ್ರಾವೆಲ್ ಬ್ಯಾಗ್​ನಿಂದ ಹೊರಗೆ ಬಂದ ಗೆಳತಿ

ಮಂಗಳೂರು: ಗೆಳತಿಯನ್ನು ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿ ಹಾಸ್ಟೆಲ್ ಒಳಗೆ ಯುವಕನೊಬ್ಬ ಕರೆದುಕೊಂಡು ಹೋದ ಘಟನೆ ಮಣಿಪಾಲದಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಮಣಿಪಾಲ ವಿವಿಯ ಎಂಐಟಿ ಕ್ಯಾಂಪಸ್ ನ ಸಿಸಿಟಿವಿ ದೃಶ್ಯಾವಳಿ ಸೆರೆಯಾಗಿದೆ.

ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ನನ್ನ ಗೆಳತಿಯನ್ನು ಹಾಸ್ಟೆಲ್ ಗೆ ದೊಡ್ಡ ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಹೋಗಿದ್ದಾನೆ. ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಚೆಕ್ ಮಾಡಿದ್ದಾರೆ.

ಈ ಸಂದರ್ಭ ಟ್ರಾವೆಲ್ ಬ್ಯಾಗ್ ಎತ್ತಿಕೊಂಡು ಓಡಲು ಯುವಕ ಪ್ರಯತ್ನಿಸಿದ್ದಾನೆ. ಸಂಶಯ ಬಂದು ಸೂಟ್ ಕೇಸ್ ತೆಗೆದು ನೋಡಿದಾಗ ಯುವತಿ ಹೊರಗೆ ಬಂದಿದ್ದಾಳೆ. ಮಣಿಪಾಲ ಪೊಲೀಸರು ನಮಗೆ ಈ ವಿಚಾರ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button