ಜಿಲ್ಲಾ ಸುದ್ದಿದಾವಣಗೆರೆ
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ : ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಮಂಗೇನಹಳ್ಳಿ ಗ್ರಾಮದ ಬಳಿ ನಡೆದಿದೆ.
21 ವರ್ಷದ ಕಾರ್ತಿಕ್ ಹಾಗೂ 20 ವರ್ಷದ ಅಭಿಷೇಕ್ ಸಾವನ್ನಪ್ಪಿದ ಬೈಕ್ ಸವಾರರು ಎಂದು ಗುರುತಿಸಲಾಗಿದೆ. ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ರಸ್ತೆಯಲ್ಲಿ ಇಬ್ಬರು ಬೈಕ್ ನಲ್ಲಿ ಸ್ಪೀಡಾಗಿ ಬಂದು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಚನ್ನಗಿರಿ ತಾಲೂಕಿನ ತಣಿಗೆರೆ ಗ್ರಾಮದ ನಿವಾಸಿ ಅಭಿಷೇಕ್ ಹಾಗೂ ಮೆದಿಕರೆ ಗ್ರಾಮದ ನಿವಾಸಿ ಕಾರ್ತಿಕ್ ತಣಿಗೆರೆಯಿಂದ ಸಂತೆಬೆನ್ನೂರಿಗೆ ಹೋಗುತ್ತಿದ್ದು, ಅಭಿಷೇಕ ಸಂತೆಬೆನ್ನೂರು ಕಡೆಯಿಂದ ದಾವಣಗೆರೆ ಕಡೆ ಬರುತ್ತಿರುವಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




