Latestಜಿಲ್ಲಾ ಸುದ್ದಿರಾಮನಗರ
ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ರಾಮನಗರ: ಜಿಲ್ಲೆ ಬಿಡದಿಯ ಕೆಂಚನಕುಪ್ಪೆ ಬಳಿಯ ಕುಂಬಾರಕಟ್ಟೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಶಾಲಾ ಬಾಲಕರು ಸಾವನ್ನಪ್ಪಿದ್ದಾರೆ.
ಬಿಡದಿಯ ಸರಕಾರಿ ಶಾಲೆಯಲ್ಲಿ 5 ನೇ ತರಗತಿ ಓದುತ್ತಿದ್ದ ಕೌಶಿಕ್(12) ಮತ್ತು ಕರ್ಣ(11) ಮೃತ ಬಾಲಕರಾಗಿದ್ದು, ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಕುಂಬಾರಕಟ್ಟೆ ಭರ್ತಿಯಾಗಿತ್ತು.
ಈ ಕಟ್ಟೆಯಲ್ಲಿ ಈಜಾಡುತ್ತಿದ್ದ ಬಾಲಕರನ್ನು ಸ್ಥಳೀಯರು ಗದರಿಸಿ ಮನೆಗೆ ಕಳುಹಿಸಿದ್ದರು ಆದ್ರೂ ಕೂಡ ಸಂಜೆ ವೇಳೆಗೆ ಮತ್ತೆ ವಾಪಸ್ ಬಂದ ಬಾಲಕರು ಕಟ್ಟೆಯಲ್ಲಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದರು.
ಇಂದು ಮುಂಜಾನೆ ನುರಿತ ಈಜುಗಾರರಿಂದ ಬಾಲಕರ ಮೃತ ದೇಹಗಳನ್ನು ಹೊರಗೆ ತೆಗೆಯಲಾಗಿದೆ. ಸ್ಥಳಕ್ಕೆ ಬಿಡದಿ ಪೋಲಿಸರು ಧಾವಿಸಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತ ಬಾಲಕರ ಶವಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಿಡದಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



