ಜಿಲ್ಲಾ ಸುದ್ದಿಮೈಸೂರು

ಹಣ ವಸೂಲಿ ಯತ್ನ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಮೈಸೂರ: ಸುಳ್ಳು ಪ್ರಕರಣ ದಾಖಲಿಸಿ ಹಣ ವಸೂಲಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನಜರ್​ ಬಾದ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು‌ಗೊಳಿಸಿ
ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತನಿಖೆಗೆ ಆದೇಶಿಸಿದ್ದಾರೆ.

ನಜರ್ ಬಾದ್ ಠಾಣೆಯ ಎಎಸ್ಐ ಗೋವಿಂದನಾಯಕ‌ ಹಾಗೂ ಹೆಡ್ ಕಾನ್ಸ್‌ಟೇಬಲ್ ಚನ್ನಬಸಪ್ಪರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಅಕ್ಟೋಬರ್ 17 ರಂದು ಕೆ.ಸಿ.ಬಡಾವಣೆಯ ಆರ್ಚ್ ಬಳಿ ನಡೆದಿದ್ದ ಸಣ್ಣಪುಟ್ಟ ಗಲಾಟೆಗೆ ಸಂಬಂಧಿಸಿದಂತೆ ಕೆಲವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದಾರೆ.

ಬಳಿಕ ಈ ಪ್ರಕರಣವನ್ನು ಇತ್ಯರ್ಥ ಪಡಿಸಲು ಹಣ ನೀಡುವಂತೆ ಪೊಲೀಸರು ಮತ್ತು ಇತರ ವ್ಯಕ್ತಿ ನಡುವೆ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಈ ಸಂಬಂಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ನಗರ ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ನಜರ್ ಬಾದ್ ಠಾಣೆಯ ಇಬ್ಬರು ಪೊಲೀಸರನ್ನು ಸೇವೆಯಿಂದ‌ ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ್ದಾರೆ. ಆರಕ್ಷಕರಾಗಿರುವ ಪೊಲೀಸರೇ ಭಕ್ಷಕರಾಗಿದ್ದು, ಸಾರ್ವಜನಿಕ ವಲಯದಲ್ಲಿ ಬಾರೀ ಟೀಕೆಗೆ ಕಾರಣವಾಗಿದೆ.

Related Articles

Leave a Reply

Your email address will not be published. Required fields are marked *

Back to top button