ಉತ್ತರ ಕನ್ನಡಜಿಲ್ಲಾ ಸುದ್ದಿಸುದ್ದಿ

ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲು

ಕಾರವಾರ : ಅರಬ್ಬಿ ಸಮುದ್ರದಲ್ಲಿ ಈಜಾಡಲು ತೆರಳಿದ ವೇಳೆ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ತಾಳಮಕ್ಕಿಯಲ್ಲಿ ನಡೆದಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಾದ ಮಂಕಿಯ ದರ್ಶನ ಉದಯ ನಾಯ್ಕ (16), ದೊಡ್ಡಗುಂದದ ಮನೋಜ್ ನಾಯ್ಕ (16) ಮೃತಪಟ್ಟ ದುರ್ದೈವಿಯಾಗಿದ್ದಾರೆ. ತಾಳಮಕ್ಕಿಯ ಬೆಂತನ ಅಂಗಡಿಯ ಹತ್ತಿರದ ಕಡಲ ತೀರಕ್ಕೆ ಈಜಲು ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಕ್ಕಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.ವಿದ್ಯಾರ್ಥಿಗಳ ಬದುಕು ದುರಂತ ಅಂತ್ಯಕಂಡಿದ್ದು,ಇದರಿಂದಾಗಿ ಕುಟುಂಬಸ್ಥರು,ಊರ ಗ್ರಾಮಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.ಘಟನೆ ಸಂಬಂಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button