ಉಡುಪಿ

ವಿಶಾಲ್ ಗಾಣಿಗ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ 4 ತಂಡ ರಚನೆ

ಉಡುಪಿ: ಉಡುಪಿಯ ವಿಶಾಲ ಗಾಣಿಗ ಕೊಲೆ ಪ್ರಕರಣ ಹಿನ್ನಲೆಯಲ್ಲಿ ಆರೋಪಿ ಪತ್ತೆಗೆ ಇದೀಗ ನಾಲ್ಕು ತಂಡ ರಚಿಸಿಲಾಗಿದೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಹೇಳಿಕೆ ನೀಡಿದ್ದಾರೆ.

ಉಡುಪಿ, ಮಣಿಪಾಲ, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಾಲ್ಕು ತಂಡಗಳ ರಚನೆ ಮಾಡಲಾಗಿದ್ದು, ಮಣಿಪಾಲದ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಹಾಗೂ ಸೋಮವಾರ ಮಧ್ಯಾಹ್ನ ಬ್ರಹ್ಮಾವರದಲ್ಲಿ ನಡೆದಿದ್ದ ಒಂಟಿ ಮಹಿಳೆ ಕೊಲೆ ಇದಾಗಿದ್ದು ಮಹಿಳೆಯ ಕುತ್ತಿಗೆ ಬಿಗಿದು ದುಷ್ಕರ್ಮಿಗಳು ಕೊಲೆ ನಡೆಸಿದ್ದಾರೆ.

ಮೃತ ದೇಹದಿಂದ ಚಿನ್ನದ ಬಳೆ ಕರಿಮಣಿ ಸರ ಕಿವಿಯೋಲೆ ಕದ್ದು ಪರಾರಿಯಾಗಿದ್ದಾರೆ ಹಾಗೂ ಬ್ಯಾಂಕಿನಿಂದ ತಂದಿದ್ದ ನಗದಿನ ಜೊತೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮಾಡುತ್ತಿರುವ ಪೊಲೀಸರು ಶೀಘ್ರ ಆರೋಪಿ ಬಂಧನ ಮಾಡುತ್ತೇವೆ ಎಂದು
ಉಡುಪಿ ಎಸ್ ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.

Related Articles

Back to top button