ಕೊರೋನಾ: ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ
ಉಡುಪಿ: ಜಿಲ್ಲೆಯಾದ್ಯಂತ ಕೊರೋನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆ ಇದೀಗ ಜಿಲ್ಲಾಧಿಕಾರಿ ಜಿ ಜಗದೀಶ್ ಸೆಕ್ಷನ್ 144(3) ಜಾರಿಮಾಡಿದ್ದಾರೆ.
ರಾತ್ರಿ 10 ಗಂಟೆಯಿಂದ 5:00 ಗಂಟೆವರೆಗೆ ನೈಟ್ ಕರ್ಫ್ಯೂ ಜಿಲ್ಲೆಯಾದ್ಯಂತ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಪಬ್ ಗಳಿಗೆ ಅವಕಾಶ ಇಲ್ಲ ಹಾಗೂ ಈಜುಕೊಳದಲ್ಲಿ ತರಬೇತಿ ಮಾತ್ರ, ಸಾರ್ವಜನಿಕರಿಗೆ ಪ್ರವೇಶ ಇಲ್ಲ ಮತ್ತು ಮೈದಾನ, ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಅವಕಾಶ ಇರುತ್ತಾದೆ ಆದರೆ ಯಾವುದೇ ರಾಜಕೀಯ, ಸಾರ್ವಜನಿಕ,ಸಭೆ-ಸಮಾರಂಭಗಳಿಗೆ ಅವಕಾಶ ಇಲ್ಲ ಮತ್ತು ಕೌಟುಂಬಿಕ ಕಾರ್ಯಕ್ರಮಗಳಲ್ಲಿ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗುತ್ತಾದೆ.
ಜಿಲ್ಲೆಯಾದ್ಯಂತ ದೇವಸ್ಥಾನದಲ್ಲಿ ನಡೆಯುವ ಜಾತ್ರೆ ಉತ್ಸವ ಹಾಗೂ ಮೆರವಣಿಗೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಡಿಸಿ ಖಡಕ್ ಎಚ್ಚರಿಕೆ ನೀಡಿದ್ದು
ಸಾರ್ವಜನಿಕ ಸಾರಿಗೆ ಬಸ್ ಗಳಲ್ಲಿ ಜನರು ನಿಂತು ಪ್ರಯಾಣಿಸಿದರೆ ದಂಡ ವಿಧಿಸಲಾಗುತ್ತದೆ ಎಂದು ಆದೇಶ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಚಿತ್ರಮಂದಿರದಲ್ಲಿ ಶೇಕಡಾ 50 ವೀಕ್ಷಕರಿಗೆ ಅವಕಾಶ ನೀಡಲಾಗಿದ್ದು ಯಾವುದೇ ಕಾರಣಕ್ಕೂ ಶೇಕಡಾ 50ಕ್ಕಿಂತ ಹೆಚ್ಚು ವೀಕ್ಷಕರು ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಬಂದರೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಜಿಲ್ಲೆಯಲ್ಲಿ ಕರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ಖಡಕ್ ಆದೇಶ ಹೊರಡಿಸಿದ್ದಾರೆ.




