ಉಡುಪಿ

ದೀಪಾವಳಿ ಆಚರಣೆ ಸಂದರ್ಭ ವಿಷಜಂತು ಕಡಿದು ಯುವಕ ಸಾವು

ಕಾಪು: ದೀಪಾವಳಿ ಹಬ್ಬದ ದಿನ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ನಡೆದಿದೆ. ಕಾಪುವಿನ ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ.

ಬಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಡಿದಿತ್ತು. ಮನೆಯವರು ತತ್ ಕ್ಷಣ ಅವರನ್ನು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ಆತ, ಶುಕ್ರವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button