ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಲಾರಿಗೆ ಅಪರಿಚಿತ ವಾಹನ‌ ಡಿಕ್ಕಿ‌: ಸ್ಥಳದಲ್ಲೇ ಲಾರಿ ಚಾಲಕ ಸಾವು

ಹುಬ್ಬಳ್ಳಿ: ನಗರದ ಹೊರವಲಯದ ಬೈಪಾಸ್ ನಲ್ಲಿ ಚಲಿಸುತ್ತಿದ್ದ ಲಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಲಾರಿಯೂ ಕಟ್ಟಿಗೆಯನ್ನ ಹೇರಿಕೊಂಡು ದಾಂಡೇಲಿಯತ್ತ ಹೋಗುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ಶವ ಇನ್ನೂ ಲಾರಿಯಲ್ಲಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡುತ್ತಿದ್ದಾರೆ.ಬೆಳಗ್ಗೆ ಮಂಜು ಕವಿದ ಸಮಯದಲ್ಲಿ ದುರ್ಘಟನೆ ನಡೆದಿದೆ ಎಂಬ ಶಂಕೆಯಿದ್ದು, ಪರಾರಿಯಾಗಿರುವ ವಾಹನದ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button