ಉತ್ತರ ಕನ್ನಡ
ಅಪಘಾತ; ಬೈಕ್ ಸವಾರ ಸಾವು

ಕಾರವಾರ : ಬೈಕ್ ಸ್ಕಿಡ್ ಆಗಿ ಪಿಕಪ್ ಗೆ ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಿರೇಕೈಗದ್ದೆ ತಿರುವಿನಲ್ಲಿ ಸಂಭವಿಸಿದೆ.
ಬೈಕಿನಲ್ಲಿ ಶಿರಸಿಯಿಂದ ಹೆಗಡೆಕಟ್ಟಾ ಸಂಚರಿಸುವ ಸಂದರ್ಭದಲ್ಲಿ ಅಜಾಗರೂಕತೆ ಚಾಲನೆಯಿಂದ ಈ ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆಗೆ ಗಾಯಗಳಾಗಿವೆ.
ಬೈಕ್ ನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿದ್ದು,ಬೈಕ್ ನ್ನು ನಿಯಂತ್ರಿಸಲಾಗದೆ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು,ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮೃತ ಯುವಕನನ್ನು ರೋಷನ್ ಫರ್ನಾಂಡೀಸ್ (22) ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




