ಕೇರಳ, ಮಹಾರಾಷ್ಟ್ರ ಪ್ರವಾಸಿಗರಿಗೆ ನೆಗೆಟಿವ್ ಇಲ್ಲವೆ ಲಸಿಕೆ ಪ್ರಮಾಣಪತ್ರ ಕಡ್ಡಾಯ

ಕಾರವಾರ : ಮುರ್ಡೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್. ಇಂದು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರಿಶೀಲನೆ ನಡೆಸಿದರು.
ದೇವಾಲಯಕ್ಕೆ ಬರುವ ಪ್ರವಾಸಿಗರಿಗೆ ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ಚಿಸಲಾಗಿದ್ದು,ವಿಶೇಷವಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರು 75 ಗಂಟೆಯೊಳಗಿನ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಹಾಗೂ ಒಂದು ಸುತ್ತಿನ ಲಸಿಕೆ ಪಡೆದ ವರದಿ ತರುವುದನ್ನು ಕಡ್ಡಾಯ ಮಾಡಲಾಗಿದೆ.
ಬೇರೆ ರಾಜ್ಯದಿಂದ ಬರುವ ಪ್ರವಾಸಿಗರ ವಾಹನ ಸಂಖ್ಯೆ ಮತ್ತು ಅವರ ಮಾಹಿತಿ ಯನ್ನು ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.ಅದರಂತೆ ತಾಲೂಕಿನ ಪ್ರಸಿದ್ಧ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನ,ಕಡವಿನಕಟ್ಟಾ ದುರ್ಗಾಪರಮೇಶ್ವರಿ ದೇವಸ್ಥಾನ, ಸೋಡಿಗದ್ದೆ ಮಹಾಸತಿ ದೇವಸ್ಥಾನ, ಭಟ್ಕಳ ಚೆನ್ನಪಟ್ಟಣ ಹನುಮಂತ ದೇವಸ್ಥಾನ ಸೇರಿದಂತೆ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ಇಂದಿನಿಂದ ಕೋವಿಡ್ ಮಾರ್ಗಸೂಚಿ ಪಾಲಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಎಲ್ಲಾ ಧಾರ್ಮಿಕ ದೇವಸ್ಥಾನಗಳಲ್ಲಿ ನಿಗಾವಹಿಸಲು ಗ್ರಾಮಲೆಕ್ಕಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್.ಅವರು ತಿಳಿಸಿದ್ದಾರೆ.




