ಉತ್ತರ ಕನ್ನಡ

ಭಟ್ಕಳ ನ್ಯಾಯಾಲಯದಲ್ಲಿ ಬೆಂಕಿ ಅವಘಡ; ಸುಟ್ಟು ಕರಕಲಾದ ದಾಖಲೆಗಳು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ರಂಗಿನಕಟ್ಟೆಯಲ್ಲಿರುವ ಭಟ್ಕಳ ಜೆ.ಎಂ.ಎಫ್.ಸಿ.ನ್ಯಾಯಾಲಯದ ಕಟ್ಟಡದಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ನಡೆದಿದೆ.ನ್ಯಾಯಾಲಯದ ಮುಂದಿನ ಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು,ದಾಖಲೆಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ಪ್ರಥಮ ಮಾಹಿತಿಯನ್ನು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದು,ಬೆಳಿಗ್ಗೆ 4.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಹಲವು ತಾಸುಗಳ ಪ್ರಯತ್ನದಿಂದ ಬೆಂಕಿ ನಂದಿಸಿದ್ದಾರೆ.

ನ್ಯಾಯಾಲಯದಲ್ಲಿದ್ದ ಸಾವಿರಾರು ಕೇಸುಗಳ ಕಡತಗಳು ಅವಘಡದಲ್ಲಿ ಸುಟ್ಟುಹೋಗಿದ್ದು,ಕಾಗದಕ್ಕೆ ಬೆಂಕಿ ಹೊತ್ತಿಕೊಂಡ ಕಾರಣ ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಾಗಿತ್ತು.ಅಗ್ನಿ ಶಾಮಕದಳದ ಸಿಬ್ಬಂದಿ ಸಾಕಷ್ಟು ಕಡತಗಳನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ.

ಸ್ಥಳಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button