ಉತ್ತರ ಕನ್ನಡ
ಗಾಂಜಾ ಸಾಗಾಟ; ಓರ್ವನ ಬಂಧನ

ಕಾರವಾರ : ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನ ಗೋಕರ್ಣ ಪೊಲೀಸರು ಬಂಧಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ಸಾಣಿಕಟ್ಟಾ ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಸಮಾರು 2.ಕೇ.ಜಿ 46 ಗ್ರಾಂ.ತೂಕದ ಸುಮಾರು 40 ಸಾವಿರ ರೂಪಾಯಿ ಬೆಲೆ ಬಾಳುವ ಗಾಂಜಾ ಮಾದಕ ಪದಾರ್ಥವನ್ನ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕ್ರಿಸ್ಮಸ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಹಳೇಹುಬ್ಬಳ್ಳಿ ಮೂಲದ ನಾಗರಾಜ ಮೋತಿಲಾಲ್ (49) ಬದ್ದಿ ಎಂದು ಗುರುತಿಸಲಾಗಿದೆ.
ಘಟನೆ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿ.ಎಸ್.ಐ ನವೀನ ನಾಯ್ಕ,ಸಿ.ಪಿ.ಐ ವಸಂತ ಆಚಾರಿ ಹೆಚ್ಚಿನ ತನಿಖೆ ನಡೆಸಿದ್ದಾರೆ.




