ಉತ್ತರ ಕನ್ನಡ

ಶಿರಸಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಕಾರವಾರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.

ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮೌಲಾಲಿ ದಾದೆ ಅಲಿ ಖಾನ್ (26) ಬಂಧಿತ ಆರೋಪಿಯಾಗಿದ್ದು,ಈತ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡು ನಿನ್ನ ಜೊತೆ ಮಾತನಾಡುವುದಿದೆ ಎಂದು ನಂಬಿಸಿ ಶಿರಸಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಆಕೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದು,ಲೈಂಗಿಕ ಕಿರುಕುಳ ನೀಡಿದ್ದಾನೆ.ಬಾಲಕಿಯ ತಂದೆ ಬಂದ ನಂತರ ಈತ ಪರಾರಿಯಾಗಿದ್ದ ಎನ್ನಲಾಗಿದೆ.

ಈ ಸಂಬಂಧ ಆರೋಪಿ ವಿರುದ್ಧ ಶಿರಸಿ ಠಾಣೆಯಲ್ಲಿ ಬಾಲಕಿ ತಂದೆ ದೂರು ನೀಡಿದ್ದು,ಆರೋಪಿಯನ್ನು ಶಿರಸಿ ಠಾಣೆ ಪೊಲೀಸರು ಪೋಕ್ಸೋ ಮತ್ತು ಅಟ್ರಾಸಿಟಿ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button