ಉತ್ತರ ಕನ್ನಡ

ಉತ್ತರಕನ್ನಡ: ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ

ಕಾರವಾರ : ರಾಜ್ಯದಲ್ಲಿ ಇಂದು ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟವಾಗಿದ್ದು, ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.

ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರದ ಪ್ರಶಾಂತಿ ವಿದ್ಯಾನಿಕೇತನದಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ ಹಾಗೂ ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಮತ್ತು ರೇಷ್ಮಾ ಹೆಗಡೆ 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

ಇನ್ನು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಸರ್ಕಾರಿ ಮಾಧ್ಯಮಿಕ ಫ್ರೌಡಶಾಲೆಯ ಭೂಮಿಕಾ ಕೃಷ್ಣ ನಾಯ್ಕ 625 ಅಂಕಕ್ಕೆ 625 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.ಕಳೆದ ವರ್ಷ ಒಬ್ಬ ವಿದ್ಯಾರ್ಥಿನಿ 625 ಅಂಕ ಗಳಿಸಿ ಸಾಧನೆ ಮಾಡಿದ್ದಳು.

ಆದರೆ ಈ ಬಾರಿ ಮೂವರು ವಿದ್ಯಾರ್ಥಿಗಳು 625 ಅಂಕ ಪಡೆದು ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು,ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.

Spread the love

Related Articles

Leave a Reply

Your email address will not be published. Required fields are marked *

Back to top button