ಉತ್ತರ ಕನ್ನಡ

ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದಾತ ನೀರು ಪಾಲು

ಕಾರವಾರ : ಸಮುದ್ರದ ನೀರಿನಲ್ಲಿ ಮೋಜು ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಇತ್ತೀಚಿಗೆ ಏರುತ್ತಿದ್ದು,ಇಂದು ಮತ್ತೊಂದು ಇಂತಹುದೇ ಪ್ರಕರಣ ವರದಿಯಾಗಿದೆ.

ಕುಮಟಾ ತಾಲೂಕಿನ ಗೋಕರ್ಣದ ಸಮುದ್ರದಲ್ಲಿ ಈಜಲು ಹೋದ ಯುವಕ ನೀರು ಪಾಲಾದ ಘಟನೆ ನಡೆದಿದೆ.ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ನೀರಿನಲ್ಲಿ ಮುಳುಗಿ ನಾಪತ್ತೆಯಾದ ಯುವಕ ಎನ್ನಲಾಗಿದೆ.

ಬೆಂಗಳೂರಿನಿಂದ ಗೋಕರ್ಣಕ್ಕೆ 8 ಜನ ಸ್ನೇಹಿತರು ಇಂದು ಮುಂಜಾನೆ ಪ್ರವಾಸಕ್ಕೆ ಬಂದಿದ್ದರು.ಸ್ಥಳೀಯ ಜನರ ಎಚ್ಚರಿಕೆ ನಡುವೆಯೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದರು.ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದರು.ಈ ವೇಳೆ ಓರ್ವನನ್ನು ರವಿ ನಾಯ್ಕ ನೇತೃತ್ವದ ಲೈಫ್ ಗಾರ್ಡ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದೆ.

ಅರುಣ್ ಎಂಬುವವರನ್ನು ಹೊರತುಪಡಿಸಿ ಸಮುದ್ರಕ್ಕೆ ಇಳಿದಿದ್ದ ಉಳಿದವರು ಬಚಾವ್ ಆಗಿದ್ದಾರೆ.ಆದರೆ ಸಮುದ್ರದ ಅಲೆಗಳ ಅಬ್ಬರಕ್ಕೆ ಅರುಣ್ ತೇಲಿ ಹೋಗಿದ್ದಾನೆ.ಸಮುದ್ರ ಪಾಲಾದ ಈತನ ಪತ್ತೆಗಾಗಿ ಪೊಲೀಸರು ಹಾಗೂ ಲೈಫ್ ಗಾರ್ಡಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.ಈ ವರೆಗೂ ಅರುಣ್ ಮೃತದೇಹ ಪತ್ತೆಯಾಗಿಲ್ಲ.ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button