ಉತ್ತರ ಕನ್ನಡ
ನದಿಯಲ್ಲಿ ಮುಳುಗಿ ಯುವಕ ಸಾವು

ಕಾರವಾರ : ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಜಾಗಟೆಬೈಲನ ವೆಂಕಟಾಪುರ ನದಿಯಲ್ಲಿ ಯುವಕನೋರ್ವ ನೀರು ಪಾಲಾದ ಘಟನೆ ನಡೆದಿದೆ.
ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಇಳಿದ ಯುವಕ ಜಯಂತ ರಾಮ ಗೊಂಡ (19) ನೀರು ಪಾಲಾಗಿದ್ದಾನೆ. ಈತ ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಇಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದ.ಸುದ್ದಿ ತಿಳಿದು ಸ್ಥಳಕ್ಕೆ ನೂರಾರು ಜನರು ಆಗಮಿಸಿ ನದಿ ದಂಡೆಯಲ್ಲಿ ಸೇರಿದ್ದರು.
ಸ್ಥಳೀಯ ಯುವಕರು ಕೆಲ ಸಮಯ ಹುಡುಕಾಟ ನಡೆಸಿ ನದಿಯಲ್ಲಿ ಮುಳುಗಿ ಮೃತಪಟ್ಟ ಯುವಕನ ಶವವನ್ನು ಮೇಲಕ್ಕೆ ಎತ್ತಿದ್ದು,ಯುವಕನ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಯುವಕನ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಸ್ಥಳದಲ್ಲಿ ನೂರಾರು ಜನ ಸೇರಿದ್ದರು.ಸ್ಥಳಕ್ಕೆ ಗ್ರಾಮೀಣ ಠಾಣೆ ಪಿ.ಎಸ್.ಐ.ಭರತ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




