ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ವೀಕೆಂಡ್ ಕರ್ಪ್ಯೂ ಕಟ್ಟು ನಿಟ್ಟಾಗಿ ಜಾರಿ ಮಾಡಲು ಮುಂದಾದ ಹುಬ್ಬಳ್ಳಿ ಪೊಲೀಸರು

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಓಮಿಕ್ರಾನ್ ದಿನೇ ದಿನೇ ಏರಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಡೀ ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಮಾಡಲಾಗಿದೆ. ಶುಕ್ರವಾರ ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ. ಇದನ್ನ ಕಟ್ಟು ನಿಟ್ಟಾಗಿ ಜಾರಿ ಮಾಡಲು ಹುಬ್ಬಳ್ಳಿ ಪೊಲೀಸರು ಮುಂದಾಗಿದ್ದಾರೆ.

ವೀಕೆಂಡ್ ಕರ್ಫ್ಯೂ ಹಿನ್ನೆಲೆ ಹುಬ್ಬಳ್ಳಿ ಪೊಲೀಸರು ನಗರದ ಪ್ರಮುಖ ವೃತ್ತಗಳಲ್ಲಿ ಬಿಡುಬಿಟ್ಟಿದ್ದಾರೆ. ಯಾವುದೇ ದಾಖಲೆ ಇಲ್ಲದೆ ಅನಾವಶ್ಯಕವಾಗಿ ಬೀದಿಗಿಳಿದವರಿಗೆ ದಂಡ ಪ್ರಯೋಗ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.

ನಗರದ ಪ್ರಮುಖ ವೃತ್ತಗಳಾದ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಹೊಸೂರು ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಜೊತೆಗೆ ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ವಾಹನ ಸವಾರರ ದಾಖಲಾತಿ ತಪಾಸಣೆಯ ಜೊತೆಗೆ ಐಡಿ ಕಾರ್ಡ್ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಸ್ಕ್ ಹಾಕದವರಿಗೆ ದಂಡ
ಚೆನ್ನಮ್ಮ ವೃತ್ತದಲ್ಲಿ ಬೈಕ್ ಸವಾರರು ಮಾಸ್ಕ್ ಹಾಕದೆ ಹಾಗೂ ಅನಾವಶ್ಯಕವಾಗಿ ಓಡಾಟ ನಡೆಸುತ್ತಿರುವ ವಾಹನ ಸವಾರರಿಗೆ ಪೊಲೀಸರು ದಂಡ ಹಾಕಿದ್ದಾರೆ. ಅಲ್ಲದೆ ಅನಾವಶ್ಯಕವಾಗಿ ಓಡಾಡುವವರಿಗೆ ವೀಕೆಂಡ್ ಕರ್ಪ್ಯೂ ರೂಲ್ಸ್ ಪಾಲನೆಗೆ ಖಡಕ್‌ ಸೂಚನೆ ನೀಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button