ಚಿಕ್ಕಮಗಳೂರುಜಿಲ್ಲಾ ಸುದ್ದಿ

ಸಚಿವ ಅಶ್ವತ್ಥನಾರಾಯಣ ವಜಾಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಸಂಸದ ಡಿ ಕೆ ಸುರೇಶ್ ವಿರುದ್ಧ ಗೂಂಡಾ ವರ್ತನೆ ತೋರಿದ ಸಚಿವ ಅಶ್ವತ್ಥನಾರಾಯಣರನ್ನು ಉಚ್ಛಾಟಿಸುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಈ ಪ್ರತಿಭಟನೆ ನಡೆಯಿತು. ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಅವರು ಡಿಕೆ ಸುರೇಶ್ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಮಾಡಿರುವುದನ್ನು ಖಂಡಿಸಿದರು.

ಸಚಿವ ಸ್ಥಾನದಿಂದ ಅವರನ್ನು ಕೈಬಿಟ್ಟು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಜಿತ್ ಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ಸಂತೋಷ್, ಮಹಿಳಾ ಘಟಕದ ರೇಖಾ ಹುಲಿಯಪ್ಪಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಜಿಲ್ಲಾ ಕಿಸಾನ್ ಸೆಲ್ ಕಾರ್ಯದರ್ಶಿ ರಸೂಲ್ ಖಾನ್ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button