ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಧಾರವಾಡದಲ್ಲಿ ಚೇಳು ಕಡಿತಕ್ಕೆ ಯುವಕನ ಸಾವು

ಹುಬ್ಬಳ್ಳಿ : ಮೂರು ದಿನಗಳ ಹಿಂದೆ ಮನೆಯಲ್ಲಿ ಚೇಳು ಕಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳದ ಯುವಕನಿಗೆ ಆರೋಗ್ಯದಲ್ಲಿ ಏರುಪೇರಾಗಿ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಹೆಬ್ಬಳ್ಳಿ ಗ್ರಾಮದ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಯಲ್ಲಪ್ಪ ಮನೆಯಲ್ಲಿ ಚೇಳು ಕಡಿದು ಮೂರು ದಿನವಾದರೂ ಕೂಡಾ ಚಿಕಿತ್ಸೆ ಪಡೆಯದೆ ಮನೆಯಲ್ಲಿದ್ದ. ನಂತರ ಮೂರು ದಿನಗಳ ಬಳಿಕ ಯಲ್ಲಪ್ಪ ಅಸ್ವಸ್ಥಗೊಂಡಿದ್ದನ್ನು, ಕೂಡಲೇ ಕುಟುಂಬಸ್ಥರು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ, ಚಿಕಿತ್ಸೆ ಫಲಕಾರಿಯಾಗದೆ ಈಗ ಯಲ್ಲಪ್ಪ ಮೃತಪಟ್ಟಿದ್ದಾನೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button