ಮನರಂಜನೆಸಿನಿಮಾಸೆಲೆಬ್ರಿಟಿ
Amitabh Bachchan: ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ನಟ ಅಮಿತಾಬ್ ಬಚ್ಚನ್

ಬಾಲಿವುಡ್ ನ ಸ್ಟಾರ್ ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಮನೆಯಲ್ಲಿ ನೀರಿನ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸಿದ ನಟ ಬಳಿಕ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.
ನಟ ಅಮಿತಾಬ್ ಬಚ್ಚನ್ ಅವರು ತಮ್ಮ ವೈಯಕ್ತಿಕ ಬ್ಲಾಗ್ ನಲ್ಲಿ ತಮ್ಮ ಅಭಿಮಾನಿಗಳೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಿದ್ದರು. ಇತ್ತೀಚೆಗೆ ಅವರು ತಮ್ಮ ಬ್ಲಾಗ್ ನಲ್ಲಿ ತಮ್ಮ ಮನೆಯಲ್ಲಿ ನೀರಿನ ಸಮಸ್ಯೆ ಇರುವುದನ್ನು ಬಹಿರಂಗಪಡಿಸಿದ್ದಾರೆ.
ಬಿಗ್ ಬಿ ಅವರು ‘ಕೌನ್ ಬನೇಗಾ ಕರೋಡಪತಿ 13 ‘ ಗಾಗಿ ಮುಂಜಾನೆ ಚಿತ್ರೀಕರಣಕ್ಕೆ ಹೋಗಲು ಬೆಳಿಗ್ಗೆ 6 ಗಂಟೆಗೆ ಎಚ್ಚರಗೊಂಡಿದ್ದಾರೆ. ಆ ವೇಳೆ ಈ ವಿಚಾರ ತಿಳಿಸಿದ್ದಾರೆ. ಬಳಿಕ ಇಂತಹ ವಿಚಾರವನ್ನು ತಿಳಿಸಿದ್ದಕ್ಕಾಗಿ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ. ಅಲ್ಲದೇ ಅವರು ಇತ್ತೀಚೆಗೆ ಬಿಡುಗಡೆಯಾದ ಅವರ ‘ಚೆಹ್ರೆ’ ಚಿತ್ರದ ಬಗ್ಗೆಯೂ ಮಾತನಾಡಿದ್ದಾರೆ.




