ಮನರಂಜನೆಸಿನಿಮಾಸೆಲೆಬ್ರಿಟಿ
ಪೊಲೀಸ್ ಠಾಣೆಗಳಲ್ಲಿ ಅಳವಡಿಸಲು 800 ಏರ್ ಪ್ಯೂರಿಫೈಯರ್ ಗಳನ್ನು ವಿತರಿಸಿದ ಬಾಲಿವುಡ್ ನಟ

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಇತ್ತೀಚೆಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲು ಕೊವಿಡ್ 19 ವೈರಸ್ ವಿರುದ್ಧ ಹೋರಾಡುವ ಸುಮಾರು 800 ಏರ್ ಪ್ಯೂರಿಫೈಯರ್ ಗಳನ್ನು ವಿತರಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ದಾನ ಕಾರ್ಯಗಳಲ್ಲಿ ಸಕ್ರಿಯರಾಗಿರುವ ನಟ ಸುನೀಲ್ ಶೆಟ್ಟಿ ಇತ್ತೀಚೆಗೆ ಮುಂಬೈ ಪೊಲೀಸ್ ಆಯುಕ್ತರಾದ ಶ್ರೀ ಹೇಮಂತ್ ನಾಗ್ರಾಲೆ ಅವರನ್ನು ಭೇಟಿ ಮಾಡಿದ್ದಾರೆ. ಮತ್ತು ಕೋವಿಡ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಮತ್ತು ಎಲ್ಲಾ ಸುರಕ್ಷತಾ ಪ್ರೋಟೋಕಾಲ್ ಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸುನೀಲ್ ಶೆಟ್ಟಿ ಈ ಕೆಲಸ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಸುನೀಲ್ ಶೆಟ್ಟಿಯವರ ಈ ಬೆಂಬಲವನ್ನು ಹೆಚ್ಚು ಪ್ರಶಂಸಿಸಲಾಗುತ್ತದೆ. ಏಕೆಂದರೆ ಅವರು ವಿತರಿಸಿದ ಈ ಉತ್ಪನ್ನಗಳು ಅವರ ಉದ್ದೇಶವನ್ನು ಸಾಧಿಸಲು ಸಹಾಯ ಮಾಡುತ್ತದೆ ಎನ್ನಲಾಗುತ್ತದೆ. ನಟನ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ




